James 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪ್ರಭುವನ್ನು ಮತ್ತು ತಂದೆಯನ್ನು (ದೇವರು) ಸ್ತುತಿಸಲು ನಮ್ಮ ನಾಲಿಗೆಯನ್ನು ಬಳಸುತ್ತೇವೆ; ಆದರೆ ಅದರಿಂದಲೇ ಜನರನ್ನು ಶಪಿಸುತ್ತೇವೆ. ದೇವರು ಆ ಜನರನ್ನೂ ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
Kannada BSI Bible 2016
ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲಿಗೆಯಿಂದ ತಂದೆಯಾದ ಕರ್ತನನ್ನು ಕೊಂಡಾಡುತ್ತೇವೆ; ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ಶಪಿಸುತ್ತೇವೆ.
Kannada Bible (KNCL) BSI 2016
ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ.