James 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?
Kannada BSI Bible 2016
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ.
Kannada Bible (KNCL) BSI 2016
ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?