James 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.
Kannada BSI Bible 2016
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದು ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು.
Kannada Bible (KNCL) BSI 2016
“ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು, ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ,” ಎನ್ನುವವರೇ ಕೇಳಿರಿ.