James 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.
Kannada BSI Bible 2016
ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
Kannada Bible (KNCL) BSI 2016
ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.