James 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
Kannada BSI Bible 2016
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.
Kannada Bible (KNCL) BSI 2016
ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.