James 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
Kannada BSI Bible 2016
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
Kannada Bible (KNCL) BSI 2016
ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.