James 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
Kannada BSI Bible 2016
ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಖ್ಯವಾಗಿ, ನನ್ನ ಸಹೋದರರೇ, ಆಣೆ ಇಡಲೇಬೇಡಿರಿ; ಆಕಾಶದ ಮೇಲಾಗಲಿ ಭೂವಿುಯ ಮೇಲಾಗಲಿ ಇನ್ನಾತರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
Kannada Bible (KNCL) BSI 2016
ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.