James 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
Kannada BSI Bible 2016
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಬಾಧೆಪಡುವವನು ಇದ್ದಾನೋ? ಅವನು ದೇವರನ್ನು ಪ್ರಾರ್ಥಿಸಲಿ. ನಿಮ್ಮಲ್ಲಿ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆ ಹಾಡಲಿ.
Kannada Bible (KNCL) BSI 2016
ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.