James 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ಕಾಯಿಲೆಯಾಗಿರುವವನು ಸಭಾಹಿರಿಯರನ್ನು ಕರೆಯಿಸಬೇಕು. ಹಿರಿಯರು ಅವನಿಗೆ ಎಣ್ಣೆಯನ್ನು ಹಚ್ಚಿ, ಪ್ರಭುವಿನ ಹೆಸರಿನಲ್ಲಿ ಅವನಿಗೋಸ್ಕರ ಪ್ರಾರ್ಥಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
Kannada BSI Bible 2016
ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
Kannada Bible (KNCL) BSI 2016
ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.