James 5:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
Kannada BSI Bible 2016
ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು.
Kannada Bible (KNCL) BSI 2016
ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.