James 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
Kannada BSI Bible 2016
ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.
Kannada Bible (KNCL) BSI 2016
ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.