James 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಬೆಳ್ಳಿಬಂಗಾರಗಳು ತುಕ್ಕು ಹಿಡಿಯುತ್ತವೆ. ನೀವು ತಪ್ಪಿತಸ್ಥರೆಂಬುದಕ್ಕೆ ಅದೇ ಸಾಕ್ಷಿಯಾಗಿದೆ. ಅವುಗಳ ತುಕ್ಕು ನಿಮ್ಮ ದೇಹವನ್ನು ಬೆಂಕಿಯಂತೆ ತಿಂದುಬಿಡುತ್ತವೆ. ನೀವು ಈ ಕೊನೆಯ ದಿನಗಳಲ್ಲಿ ನಿಮ್ಮ ಭಂಡಾರವನ್ನು ತುಂಬಿಸಿಕೊಂಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
Kannada BSI Bible 2016
ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
Kannada Bible (KNCL) BSI 2016
ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.