James 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸೋಹದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
Kannada BSI Bible 2016
ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.
Kannada Bible (KNCL) BSI 2016
ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.