Jeremiah 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
Kannada BSI Bible 2016
ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿತ್ತುಹಾಕುವದು, ಕೆಡವುವದು, ನಾಶಪಡಿಸುವದು, ಹಾಳುಮಾಡುವದು, ಕಟ್ಟುವದು, ನೆಡುವದು, ಈ ಕಾರ್ಯಗಳನ್ನು ಮಾಡುವದಕ್ಕೋಸ್ಕರ ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇವಿುಸಿದ್ದೇನೆ ಅಂದನು.
Kannada Bible (KNCL) BSI 2016
ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.