Jeremiah 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಿಂದ ನನಗೆ ಈ ಸಂದೇಶ ಘಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
Kannada BSI Bible 2016
ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು - ಯೆರೆಮೀಯನೇ, ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು, ಅದಕ್ಕೆ ನಾನು - ಚಚ್ಚರ ಮರದ ರೆಂಬೆಯನ್ನು ನೋಡುತ್ತೇನೆ ಅಂದೆನು.
Kannada Bible (KNCL) BSI 2016
ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು.