Jeremiah 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೊಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಆ ಹಂಡೆಯು ಉತ್ತರದಿಂದ ಈ ಕಡೆಗೆ ಬಾಗಿಕೊಂಡಿದೆ” ಎಂದು ಉತ್ತರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
Kannada BSI Bible 2016
ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದು ಸಲ ಯೆಹೋವನು ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು - ಉರಿಸುತ್ತಿರುವ ಬೆಂಕಿಯಿಂದುಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಬಡಗಲಿಂದ ಇತ್ತ ಬಾಗಿಕೊಂಡಿದೆ ಅಂದೆನು.
Kannada Bible (KNCL) BSI 2016
ಮತ್ತೆ ಸರ್ವೇಶ್ವರ ನನಗೆ, “ಇನ್ನೂ ಏನು ನೋಡುತ್ತಿರುವೆ?” ಎಂದರು. ಅದಕ್ಕೆ ನಾನು, “ಉರಿಯುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯೊಂದನ್ನು ನೋಡುತ್ತಿದ್ದೇನೆ. ಅದರ ಬಾಯಿ ಉತ್ತರದಿಂದ ಇತ್ತ ಬಾಗಿಕೊಂಡಿದೆ,” ಎಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು.