Jeremiah 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
Kannada BSI Bible 2016
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.
Kannada Bible (KNCL) BSI 2016
ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.