Jeremiah 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಘವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಘಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
Kannada BSI Bible 2016
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
Kannada Bible (KNCL) BSI 2016
ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.