Jeremiah 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳಿಬಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.
Kannada BSI Bible 2016
ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು.
Kannada Bible (KNCL) BSI 2016
ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.