Jeremiah 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳಿಬಕೆಯ ಹನೊಐಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು. ಘ ನೊಐಂ ಙೇ ನೆಐಲ್ಲ ವಿಊ ನ್ನೆ ---ನ್ನೇ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
Kannada BSI Bible 2016
ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಯೆರೂಸಲೇವಿುನವರು ಸೆರೆಹೋಗುವ ತನಕ ಯೆಹೋವನ ವಾಕ್ಯವು ಒದಗುತ್ತಿತ್ತು.
Kannada Bible (KNCL) BSI 2016
ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.