Jeremiah 10:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
Kannada BSI Bible 2016
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.
Kannada Bible (KNCL) BSI 2016
“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ”