Jeremiah 10:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
Kannada BSI Bible 2016
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;
Kannada Bible (KNCL) BSI 2016
ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.