Jeremiah 10:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.
Kannada BSI Bible 2016
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.
Kannada Bible (KNCL) BSI 2016
ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.