Jeremiah 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
Kannada BSI Bible 2016
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
Kannada Bible (KNCL) BSI 2016
ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.