Jeremiah 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. ವೈರಿಯು ನಗರವನ್ನು ಮುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.
Kannada BSI Bible 2016
ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುತ್ತಿಗೆಗೆ ಈಡಾದ ಜನವೇ, ಗಂಟು ಕಟ್ಟಿಕೊಂಡು ದೇಶದೊಳಗಿಂದ ನಡೆ.
Kannada Bible (KNCL) BSI 2016
ಮುತ್ತಿಗೆಗೆ ತುತ್ತಾದ ಜನತೆಯೇ, ಗಂಟು ಕಟ್ಟಿಕೊಂಡು ನಾಡುಬಿಟ್ಟು ನಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.