Jeremiah 10:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿಬರಲೆಂದು ಅವರನ್ನು ಬಾಧಿಸುವೆನು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಏಕೆಂದರೆ ಸರ್ವೇಶ್ವರ ನುಡಿವ ಮಾತಿದು: “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”