Jeremiah 10:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.
Kannada BSI Bible 2016
ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.
Kannada Bible (KNCL) BSI 2016
ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ: ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.