Jeremiah 10:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
Kannada BSI Bible 2016
ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.
Kannada Bible (KNCL) BSI 2016
ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.