Jeremiah 10:25 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗೆ ಕೋಪ ಬದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಊಸುವುದಿಲ್ಲ. ಆ ಜನಾಂಗಗಳು ಯಾಕೋಘ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.
Kannada Bible (KNCL) BSI 2016
ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.