Jeremiah 10:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಘಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
Kannada BSI Bible 2016
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಬಾಚಿಯಿಂದ ರೂಪಿಸುವನು.
Kannada Bible (KNCL) BSI 2016
ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.