Jeremiah 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಙೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.
Kannada BSI Bible 2016
ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.
Kannada Bible (KNCL) BSI 2016
ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.