Jeremiah 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಊಫಜ್ ನಗರದ ಘಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಘಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
Kannada BSI Bible 2016
ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವು ಊಫಜಿನಿಂದಲೂ ಸಾಗಿಬರುತ್ತವೆ; ನೀಲಧೂಮ್ರವಸ್ತ್ರಗಳು ಅವುಗಳ ಉಡುಪಾಗಿವೆ; ಇವೆಲ್ಲಾ ಕುಶಲರ ಕೌಶಲ್ಯ.
Kannada Bible (KNCL) BSI 2016
ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.