Jeremiah 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಘಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
Kannada BSI Bible 2016
ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದದ ಪಟ್ಟಣಗಳವರೂ ಯೆರೂಸಲೇವಿುನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವದಿಲ್ಲ.
Kannada Bible (KNCL) BSI 2016
ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.