Jeremiah 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಘಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಘಲಿಪೀಠಗಳಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
Kannada BSI Bible 2016
ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
Kannada Bible (KNCL) BSI 2016
ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’