Jeremiah 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ಈ ಯೆಹೂದದ ಜನರಿಗಾಗಿ ಙೇಡಿಕೊಳ್ಳಬೇಡ. ಅವರಿಗಾಗಿ ಮೊರೆಯಿಡಙೇಡ. ಅವರಿಗಾಗಿ ಪ್ರಾರ್ಥನೆ ಮಾಡಿದರೂ ನಾನು ಕೇಳುವದಿಲ್ಲ. ಆ ಜನರು ತೊಂದರೆಯನ್ನು ಅನುಭವಿಸುವರು. ಆಗ ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಕೇಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
Kannada BSI Bible 2016
ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.
Kannada Bible (KNCL) BSI 2016
ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.