Jeremiah 11:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಊಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಘಲಿಯಿಂದ ನಿನ್ನ ವಿನಾಶವನ್ನು ತಡೆಯಘಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಘಹುದೆಂದು ತಿಳಿದುಕೊಂಡಿರುವಿಯಾ?”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
Kannada BSI Bible 2016
ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸಿಯಾವೇ? ಇಂಥವುಗಳ ಮೂಲಕ ತಪ್ಪಿಸಿಕೊಂಡೀಯಾ?
Kannada Bible (KNCL) BSI 2016
“ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”