Jeremiah 11:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
Kannada BSI Bible 2016
ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿನಗೆ ಸುಂದರಫಲದಿಂದ ಅಂದವಾದ ಹಚ್ಚನೆಯ ಒಲೀವಮರವೆಂದು ಹೆಸರಿಟ್ಟಿದ್ದನು; ಆ ಮರಕ್ಕೆ ಬೆಂಕಿಯಿಕ್ಕಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
Kannada Bible (KNCL) BSI 2016
ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.