Jeremiah 11:20 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಙೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.
Kannada Bible (KNCL) BSI 2016
ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.