Jeremiah 11:22 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು;
Kannada Bible (KNCL) BSI 2016
ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.