Jeremiah 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಘಡಿಕೆಯನ್ನು ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
Kannada BSI Bible 2016
ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ನಿಮ್ಮ ಪಿತೃಗಳನ್ನು ಬರಮಾಡಿದಾಗ - ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ,
Kannada Bible (KNCL) BSI 2016
ನೀನು ಅವರಿಗೆ ಹೇಳಬೇಕಾದುದು - ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ ಅವರಿಗೆ ‘ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.