Jeremiah 11:4 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಘಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಘಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
Kannada BSI Bible 2016
ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.