Jeremiah 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನ್ನು ಸಾರು. ಈ ಒಡಂಘಡಿಕೆಯಲ್ಲಿನ ಮಾತುಗಳನ್ನು ಕೇಳಿ ಅನುಸರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
Kannada BSI Bible 2016
ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು - ಈ ನಿಬಂಧನವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
Kannada Bible (KNCL) BSI 2016
ಸರ್ವೇಶ್ವರ ನನಗೆ: “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.