Jeremiah 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಘಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಘಡಿಕೆಯನ್ನು ಪಾಲಿಸಙೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
Kannada BSI Bible 2016
ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು.
Kannada Bible (KNCL) BSI 2016
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”