Jeremiah 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?
Kannada BSI Bible 2016
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?
Kannada Bible (KNCL) BSI 2016
ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ: ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?