Jeremiah 12:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳುಮಾಡಿದ್ದಾರೆ. ಆ ಕುರುಬರು ನನ್ನ ತೋಟದ ಸಸಿಗಳನ್ನು ತುಳಿದುಬಿಟ್ಟಿದ್ದಾರೆ: ನನ್ನ ಸುಂದರವಾದ ತೋಟವನ್ನು ಮರಳುಗಾಡನ್ನಾಗಿ ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.
Kannada BSI Bible 2016
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.
Kannada Bible (KNCL) BSI 2016
ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.