Jeremiah 12:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ.
Kannada BSI Bible 2016
ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ಹಾಳು ಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾವನೂ ಮನಸ್ಸಿಗೆ ತಾರದ್ದರಿಂದ ದೇಶವೆಲ್ಲಾ ಹಾಳುಬಿದ್ದಿದೆ.
Kannada Bible (KNCL) BSI 2016
ಹೌದು, ಹಾಳುಮಾಡಿದ್ದಾರೆ ಪಾಳುಬಿದ್ದು ಅದು ನನಗೆ ಗೋಳಿಡುತ್ತಿದೆ ಯಾವನೂ ಗಮನಕ್ಕೆ ತಂದುಕೊಳ್ಳದೆ ನಾಡೆಲ್ಲ ಬಿಕೋ ಎನ್ನುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.