Jeremiah 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಗೋಊಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.
Kannada BSI Bible 2016
ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.
Kannada Bible (KNCL) BSI 2016
ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”