Jeremiah 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಜನರು ನಿನ್ನ ಸಬಂತ ಸಹೋದರರಾಗಿದ್ದಾರೆ. ನಿನ್ನ ಸಬಂತ ಕುಟುಂಘದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನೊಐಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಘಬೇಡ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.
Kannada BSI Bible 2016
ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್‌ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.
Kannada Bible (KNCL) BSI 2016
ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.