Jeremiah 12:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.
Kannada BSI Bible 2016
ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.
Kannada Bible (KNCL) BSI 2016
“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.