Jeremiah 13:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೋ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ - ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಬೇಡ ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ನನಗೆ: “ನೀನು ಹೋಗಿ ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ, “ನೀನು ಹೋಗಿ, ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.